Share this news

ಮೂಡಬಿದಿರೆ : ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು.


ಯೋಗಾಭ್ಯಾಸಕ್ಕೆ ಮೂಡಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹಾಗೂ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಗಳ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಏಕಕಾಲದಲ್ಲಿ ಯೋಗಾಭ್ಯಾಸ ಮಾಡಿದರು. ಸುಮಾರು ಒಂದು ಗಂಟೆ ಕಾಲ ಪ್ರಾಣಾಯಾಮ, ಆಸನ, ಧ್ಯಾನ, ವಿಶ್ರಾಂತಿ ಯೋಗಗಳನ್ನು ಮಾಡಿದರು.


ಈ ಹಿಂದೆ ಯೋಗಾಥಾನ್ ಹಾಗೂ ಜಂಬೂರಿ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗಾಭ್ಯಾಸ ಮಾಡಿ ಗಮನ ಸೆಳೆದಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *