Share this news

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡುಬಿದಿರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆ ಎಫ್ ಎಂ ಸಿ, ಮಧುಕರ ಪಿ ಭಾಗವತ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ನೆನಸಿಕೊಳ್ಳುವ ಸಮಯ. ಹಿರಿಯರ ತ್ಯಾಗ ಬಲಿದಾನದಿಂದ ನಾವಿಂದು ಸ್ವಮೃದ್ಧ ಜೀವನವನ್ನು ನಡೆಸುತ್ತಿದ್ದೇವೆ. ಅದರ ಸದುಪಯೋಗವನ್ನು ನೀವು ಪಡೆದುಕೊಳ್ಳಬೇಕು. ನಿಮ್ಮ ಶಿಕ್ಷಣಕ್ಕಾಗಿ ನಿಮ್ಮ ಹೆತ್ತವರು ಮಾಡುತ್ತಿರುವ ತ್ಯಾಗವನ್ನು ಅರ್ಥ ಮಾಡಿಕೊಳ್ಳಬೇಕು. ಜ್ಞಾನಾರ್ಜನೆಯ ಕರ್ತವ್ಯದಿಂದ ವಿಮುಖರಾಗುವುದೇ ಹೋರಾಟ ಆಗಬಾರದು. ಭಾರತದ ಸಂವಿಧಾನದಲ್ಲಿ ನಮಗಿರುವ ಹಕ್ಕಿನ ಜೊತೆಗೆ ನಮ್ಮ ಕರ್ತವ್ಯಗಳ ಬಗ್ಗೆಯೂ ಉಲ್ಲೇಖ ಇದೆ. ಇದನ್ನು ಮನಗಂಡು ಸತ್ಪ್ರಜೆಯಾಗಿ ಬದುಕುವ ಹೊಣೆಗಾರಿಕೆ ನಿಮ್ಮದಾಗಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್‌ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ರಶ್ಮಿತಾ ಜೈನ್, ಶೈಕ್ಷಣಿಕ ನಿರ್ದೇಶಕ ಡಾ ಬಿ ಪಿ ಸಂಪತ್ ಕುಮಾರ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್ ಉಪಸ್ಥಿತರಿದ್ದರು.
ಶಿಕ್ಷಕಿ ವೆನೆಸ್ಸಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಿಕ್ಷಕ ಜಯಶೀಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *