ಮೂಡಬಿದಿರೆ :ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಯು ಇಂದು (ಜೂ.13) ನಡೆಯಿತು.
ಮೂಲ್ಕಿ ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಅರ್ಜಿಗಳನ್ನು ಪರಿಶೀಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ತಾಲೂಕು ಕಚೇರಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.