ಮೂಡಬಿದಿರೆ: ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇವರ 130ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಗಾಂಧಿ ಜಯಂತಿ ಪ್ರಯುಕ್ತ “ಸಮುದಾಯ ಆರೋಗ್ಯ ಕೇಂದ್ರ , ಫಿಸಿಯೋಥೆರಫಿ ಘಟಕ, ಮೂಡುಬಿದಿರೆ ಪುರಸಭೆ ಬಳಿಯ ಕಟ್ಟಡದಲ್ಲಿ ನಡೆಯಿತು.
ಮೂಡುಬಿದಿರೆ ಪುರಸಭಾ ಕಂದಾಯ ಅಧಿಕಾರಿ ಶ್ರೀಮತಿ ಜ್ಯೋತಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಎಂ., ಪುರಸಭಾ ನಿಕಟಪೂರ್ವ ಅಧ್ಯಕ್ಷರಾದ ಪ್ರಸಾದ್ ಕುಮಾರ್, ನಿಕಟಪೂರ್ವ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗರಾಜ್ ಪೂಜಾರಿ , ವಾರ್ಡ್ ಸದಸ್ಯರಾದ ರಾಜೇಶ್ ನಾಯ್ಕ್, ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಥ್ ಪಣಪಿಲ, ಪ್ರಮುಖರುಗಳಾದ ಗೋಪಾಲ್ ಶೆಟ್ಟಿಗಾರ್, ಲಕ್ಷ್ಮಣ್ ಪೂಜಾರಿ, ಕಿಶೋರ್ ನಾಯ್ಕ್, ಸಾತ್ವಿಕ್ ಮಲ್ಯ, ಗೌತಮ್ ರೈ, ನೇತಾಜಿ ಬ್ರಿಗೇಡ್ ಸಂಚಾಲಕರು,ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಪಾಲ್ಗೊಂಡಿದ್ದರು.