Share this news

ಮೂಲ್ಕಿ: ಕಾರ್ಯಕರ್ತರ ಶ್ರಮದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ಸ್ಥಳೀಯ ಆಡಳಿತ ಚುನಾವಣೆ, ಮತ್ತು ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ಶೀಘ್ರದಲ್ಲಿಯೇ ನಡೆಯಲಿರುವುದರಿಂದ ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಚುನಾವಣೆಗೆ ತಯಾರಿ ನಡೆಸಬೇಕೆಂದು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಕರೆ ನೀಡಿದರು.

ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳ ಮತ್ತು ನಾಯಕರುಗಳ ಸಭೆಯಲ್ಲಿ ಮಾತನಾಡಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಉಲ್ಲಾಸ್ ಶೆಟ್ಟಿ, ಕಿಲ್ಪಾಡಿ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಪಿನಾಥ ಪಡಂಗ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಎಕ್ಕಾರು ಮೋನಪ್ಪ ಶೆಟ್ಟಿ, ಯೋಗೀಶ್ ಕೋಟ್ಯಾನ್, ಮೊದಲಾದವರು ಉಪಸ್ಥಿತರಿದ್ದರು.

 

 

 

 

Leave a Reply

Your email address will not be published. Required fields are marked *