Share this news

ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್‌ ಶಿವಕುಮಾರ್‌ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು.


ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶನಿವಾರ ಆಯೋಜಿಸಿದ್ದ ಕ್ಯಾಲೆಂಡರ್‌ ಮತ್ತು ಡೈರಿ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದ ಅವರು, ಈಗಾಗಲೇ ಕೋವಿಡ್‌ ಸಾಂಕ್ರಾಮಿಕ ಖಾಯಿಲೆಗೆ ತುತ್ತಾದವರಿಗೆ ಕಳೆದ ಬಾರಿಯ ಬಜೆಟ್‌ನಲ್ಲಿ 25 ಲಕ್ಷ ಮೀಸಲಿಡಲಾಗಿತ್ತು. ಈಗ ಪತ್ರಕರ್ತರ ಸಂಘದ ಮನವಿಯಂತೆ ಎಲ್ಲಾ ಮಾದರಿಯ ವೈದ್ಯಕೀಯ ಚಿಕಿತ್ಸಗೆ ಒಟ್ಟು 50 ಲಕ್ಷ ಮೀಸಲಿಡಲಾಗುವುದು ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಂಡಿಎ ಅಧ್ಯಕ್ಷ ಯಶಸ್ವಿ ಸೋಮಶೇಖರ್‌ ಮಾತನಾಡಿ, ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣದ ಜಾಗಕ್ಕೆ ಸಂಬಂಧಿಸಿದಂತೆ ಸ್ಥಿರೀಕರಣ ಪತ್ರವನ್ನು ನಾಳಿನ ಸಭೆಯಲ್ಲಿ ತೀರ್ಮಾನಿಸಿ ಒಂದೆರಡು ದಿನದಲ್ಲಿ ಸಂಘಕ್ಕೆ ಹಸ್ತಾಂತರಿಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *