ಕಾರ್ಕಳ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ನವೆಂಬರ್ 9 ಹಾಗೂ10 ರಂದು ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ತಂಡದ 6 ವಿದ್ಯಾರ್ಥಿಗಳು ನವೆಂಬರ್ 23 ಮತ್ತು 24ರಂದು ಮಂಡ್ಯದಲ್ಲಿ ನಡೆಯುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ತಂಡವು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿರುವುದಕ್ಕೆ ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ