ಕಾರ್ಕಳ:ಮಂಡ್ಯದ ಆದಿಚುಂಚನಗಿರಿ ಸಂಸ್ಥಾನದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ್ದ ದಕ್ಷಿಣ ಕನ್ನಡ ತಂಡದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಐದು ಬಾಲಕರು ಭಾಗವಹಿಸಿದ್ದು ತಂಡವು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ.
ಈ ತಂಡದಲ್ಲಿದ್ದ ಮುನಿಯಾಲು ಕೆಪಿಎಸ್ ಶಾಲಾ ವಿದ್ಯಾರ್ಥಿ ಸೃಜನ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು ಸಂಸ್ಥೆಗೆ ಕೀರ್ತಿ ತಂದಿರುತ್ತಾನೆ. ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗೆ ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.