ಮಂಗಳೂರು: ಬಿಹಾರದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಇಂದು ಬೆಳಗ್ಗೆ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಬಂಧಿತ ಆರೋಪಿಗಳಿಗೆ ನಿಷೇಧಿತ ಪಿಎಫ್‌ಐ ಲಿಂಕ್ ಇರುವ ಸಾಧ್ಯತೆಯಿದೆ ಎನ್ನಲಾಗಿದ್ದು, ಈ ಕುರಿತು ಎನ್‌ಐಎ ಅಧಿಕಾರಿಗಳು ನಾಲ್ವರನ್ನು ತೀವೃ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಎನ್‌ಐಎ ಅಧಿಕಾರಿಗಳು ಬೆಳ್ತಂಗಡಿ ತಾಲೂಕಿನ ವೇಣೂರು ಹಾಗೂ ಉರುವಾಲು ಗ್ರಾಮದ ಹುಣ್ಸೆಕಟ್ಟೆ ನಿವಾಸಿ ಮಹಮ್ಮದ್ ಕೈಸ್, ಮೂಡಬಿದ್ರೆಯಲ್ಲಿ ಟೈಲ್ಸ್ ಅಂಗಡಿ ಹೊಂದಿರುವ ಮಾಲಿಕನ ಮನೆ ಮೇಲೂ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಎನ್‌ಐಎ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.
ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬAಧಿಸಿದAತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.
ಎನ್‌ಐಎ ದಾಳಿ ವೇಳೆ ನಂದಾವರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಂದಾವರದ ವ್ಯಕ್ತಿಯೊಬ್ಬರು ಹಣಕಾಸಿನ ನೆರವು ನೀಡಿದ ಮೂಲ ಹಾಗೂ ವಿವರಗಳನ್ನು ಪಡೆದುಕೊಳ್ಳಲು ದಾಳಿ ನಡೆದಿತ್ತು. ಮೂವರ ವಿಚಾರಣೆ ನಡೆಸಲಾಗಿತ್ತು. ಇವರಲ್ಲಿ ಒಬ್ಬರು ದುಬೈನಿಂದ ಕಳೆದ ವರ್ಷ ಊರಿಗೆ ಮರಳಿದ್ದರು. ಉಳಿದವರು ಮೆಲ್ಕಾರ್ ಎಂಬಲ್ಲಿ ಪಾಸ್ ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದರು.