Share this news

ಕಾರ್ಕಳ:ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ,ಒಂದು ಜೀವವನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಬಗ್ಗೆ ಜನರಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡುವಂತಾಗಬೇಕು ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಕಳದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ ಇದರ ಸಭಾಪತಿ ಡಾ. ಕೆ ರಾಮಚಂದ್ರ ಜೋಶಿ ಹೇಳಿದರು.

ಅವರು ರೋಟರಿ ಕ್ಲಬ್ ಕಾರ್ಕಳ, ಬಸ್ ಏಜೆಂಟರ ಬಳಗ ಕಾರ್ಕಳ, ರೋಟರ್ಯಾಕ್ಟ್ ಕ್ಲಬ್ ಕಾರ್ಕಳ, ಯುವ ವಾಹಿನಿ(ರಿ) ಕಾರ್ಕಳ ಘಟಕ, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಕಾರ್ಕಳ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ ಕಾರ್ಕಳ, ಲಯನ್ಸ್ ಕ್ಲಬ್ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ ಅಜ್ಜರಕಾಡು ಉಡುಪಿ ಇವರ ಸಹಯೋಗದೊಂದಿಗೆ ಕಾರ್ಕಳ ಬಸ್ ಸ್ಟ್ಯಾಂಡಿನಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷರಾದ ಜಾನ್ ಡಿ ಸಿಲ್ವ ಮಾತನಾಡಿ, ರಕ್ತದಾನ ಮಾಡುವ ಮನೋಭಾವನೆ ಬೆಳೆಯುತ್ತಿರುವುದು ಉತ್ತಮ ಬೆಳವಣಿಗೆ. ರಕ್ತದಾನದಂತೆಯೇ ಮರಣದ ಬಳಿಕ ಅಮೂಲ್ಯವಾದ ದೇಹದ ಅಂಗಾಂಗ ಗಳನ್ನು ಅವಶ್ಯಕತೆ ಇರುವವರಿಗೆ ದಾನ ಮಾಡುವ ಮೂಲಕ ಅವರ ಬಾಳಲ್ಲಿ ಬೆಳಕನ್ನು ತೋರುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಕಳ ಬಸ್ ಏಜೆಂಟರ ಬಳಗದ ಅಧ್ಯಕ್ಷ ಅಶೋಕ್ ಮಂಟ್ರಾಡಿ,ಉಡುಪಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ದೀಕ್ಷಾ ಯು., ಕಾರ್ಕಳ ರೋಟರ್ಯಾಕ್ಟ್ ಕ್ಲಬ್ ಮಾಜಿ ಅಧ್ಯಕ್ಷ ಪ್ರಶಾಂತ ಆಚಾರ್ಯ , ಕಾರ್ಕಳ ಯುವ ವಾಹಿನಿ ಅಧ್ಯಕ್ಷ ಅರುಣ್ ಮಾಂಜ ,ನಿಟ್ಟೆ ಗಾಜ್ರಿಯಾ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶುಭಕರ ಅಂಚನ್, ಕಾರ್ಕಳ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅದ್ಯಕ್ಷ ಸುಶೀಲ್ ಕುಮಾರ್, ಹಿರಿಯಡ್ಕ ಲಯನ್ಸ್ ಕ್ಲಬ್ ವಲಯ ಸಭಾಪತಿ ರವೀಂದ್ರನಾಥ್ ಹೆಗಡೆ, ಗಣೇಶೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಶುಭದ ರಾವ್, ಕಾರ್ಕಳ ಬಸ್ ಸ್ಟ್ಯಾಂಡ್ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ದೇವಾಡಿಗ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 63 ಯೂನಿಟ್ ರಕ್ತ ಸಂಗ್ರಹಿಸಲಾಯಿತು
ಇಕ್ಬಾಲ್ ಅಹಮದ್ ಸ್ವಾಗತಿಸಿದರು. ವಸಂತ್ ಎಂ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

 

 

 

 

 

 

 

Leave a Reply

Your email address will not be published. Required fields are marked *