Share this news

ಜೈಪುರ: ಲೋಕಸಭಾ ಚುನಾವಣೆಗೂ ಮುನ್ನ ತೆರವಾಗಿರುವ ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿ ಇಬ್ಬರು ಅಭ್ಯರ್ಥಿಗಳು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ರಾಜಸ್ಥಾನದ ವಿಧಾನಸಭೆಯಲ್ಲಿ, ರಾಜ್ಯಸಭೆಯ ಚುನಾವಣಾಧಿಕಾರಿ ಮಹಾವೀರ ಪ್ರಸಾದ್ ಶರ್ಮಾ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಚುನ್ನಿ ಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಿದ್ದಾರೆ. ರಾಜಸ್ಥಾನದ ಎಲ್ಲಾ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಫೆಬ್ರವರಿ 20 ಮಂಗಳವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಇಂದು ನಾಮಪತ್ರ ಹಿಂಪಡೆಯಲು ನಿಗದಿತ ಸಮಯ ಮುಗಿದ ಬಳಿಕ ಪರಿಸ್ಥಿತಿ ತಿಳಿಯಾಯಿತು. ಬಳಿಕ ಚುನಾವಣಾಧಿಕಾರಿಗಳು ಮೂವರೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಮನಮೋಹನ್ ಸಿಂಗ್ ಅವರ ಸದಸ್ಯತ್ವದ ಅವಧಿ ಪೂರ್ಣಗೊಂಡ ಬಳಿಕ ಸೋನಿಯಾ ಗಾಂಧಿ ಅವರನ್ನು ಈಗ ರಾಜಸ್ಥಾನವನ್ನು ಪಕ್ಷಕ್ಕೆ ಸುರಕ್ಷಿತವೆಂದು ಪರಿಗಣಿಸಿ ಆಯ್ಕೆ ಮಾಡಲಾಗಿತ್ತು.

 

Leave a Reply

Your email address will not be published. Required fields are marked *