ಬೆಂಗಳೂರು: ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿದ್ವಂಸಕ ಕೃತ್ಯ ನಡೆಸಲು ಐಸಿಸ್ ಸಂಚು ರೂಪಿಸಿತ್ತು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾದಳದ ತನಿಖೆಯಲ್ಲಿ ಬಯಲಾಗಿದೆ. ವಿಚಾರಣೆ ವೇಳೆ ಶಂಕಿತ ಉಗ್ರರು ಈ ಕರಾಳ ಸತ್ಯ ಬಾಯ್ಬಿಟ್ಟಿದ್ದಾರೆ.
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಸಂಬAಧ ಎನ್‌ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಶಂಕಿತ ಉಗ್ರ ಮಾಝ್ ಮುನೀರ್ ಮತ್ತು ಮೊಹಮ್ಮದ್ ಶಾರಿಕ್ ಸೇರಿದಂತೆ 9 ಜನರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮೆಕಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿAಗ್ ವಿದ್ಯಾರ್ಥಿಗಳಾಗಿರುವ ಬಂಧಿತ ಶಂಕಿತ ಉಗ್ರರಾಗಿರುವ ಮೊಹಮ್ಮದ್ ಶಾರಿಕ್ (25), ಮಾಜ್ ಮುನೀರ್ ಅಹ್ಮದ್ (23), ಸೈಯದ್ ಯಾಸಿನ್ (22), ರೀಶಾನ್ ತಾಜುದ್ದೀನ್ ಶೇಖ್ (22), ಹುಜೈರ್ ಫರ್ಹಾನ್ ಬೇಗ್ (22), ಮಜಿನ್ ಅಬ್ದುಲ್ ರಹಮಾನ್ (22), ನದೀಮ್ ಅಹ್ಮದ್ (22), ಜಬೀವುಲ್ಲಾ (32) ಮತ್ತು ನದೀಮ್ ಫೈಝಲ್ ಎನ್ (27) ಅವರ ತೀವ್ರ ವಿಚಾರಣೆ ವೇಳೆ ಈ ಸತ್ಯ ಬಾಯಿಬಿಟ್ಟಿದ್ದಾರೆ.
ಐಸಿಸ್ ಹ್ಯಾಂಡ್ಲರ್ ರೋಬೋಟಿಕ್ ಕೋರ್ಸ್ ಓದುವಂತೆ ನಿರ್ದೇಶನ ನೀಡಿದ್ದರು. ಈ ಮೂಲಕ ಭವಿಷ್ಯದ ಭಯೋತ್ಪಾದಕ ಚಟುವಟಿಕೆಗಳಿಗೆ ತಯಾರಾಗುವಂತೆ ತಿಳಿಸಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಮೂಲಕ ಶಂಕಿತರು ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕರೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.