ಬೆಂಗಳೂರು : ರಾಜ್ಯದಲ್ಲಿ ಒಂದು ವಾರದಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಬಗ್ಗೆ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಶನಿವಾರ ಒಂದೇ ದಿನ 94 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ನಿನ್ನೆ ಒಂದೇ ದಿನ 64 ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 3,868 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1.65 ಪಾಸಿಟಿವಿಟಿ ದರದಂತೆ 54 ಮಂದಿಗೆ ಸೋಂಕು ದೃಢಪಟ್ಟಿದೆ.