Share this news

ಬೆಂಗಳೂರು: ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಯಜಮಾನಿ ಮಹಿಳೆಗೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ನಡವಳಿಗಳನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000 ಗಳನ್ನು ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ವಿವರವಾದ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟದ ತೀರ್ಮಾನದಂತೆ ಹೊರಡಿಸಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *