Share this news

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರೌಢಶಾಲೆಗಳಿಗೆ 6 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದ ಬೆನ್ನಲ್ಲೇ ಇದೀಗ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6 ಸಾವಿರ ಅತಿಥಿ ಶಿಕ್ಷಕರ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 6 ಸಾವಿರ ಅತಿಥಿ ಶಿಕ್ಷಕರನ್ನು ಶಾಲಾ ಆರಂಭದ ದಿನವೇ ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

Leave a Reply

Your email address will not be published. Required fields are marked *