ಬೆಂಗಳೂರು : 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ರಾಜ್ಯ ಸರ್ಕಾರಿ ನೌಕರರಿಗೆ ಶೇ. 17 ವೇತನ ಹೆಚ್ಚಳ ಮಾಡಿ ಮಧ್ಯಂತರ ಪರಿಹಾರ ಮಂಜೂರು ಮಾಡಿ ಅದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದೇವೆ. ರಾಜ್ಯ ಸರ್ಕಾರಿ ನೌಕರರ ವೇತನ ಶೇ.17 ರಷ್ಟು ಹೆಚ್ಚಳ ಮಾಡಿ ಆದೇಶ, ಎನ್ ಪಿಎಸ್ ಬಗ್ಗೆ ಪರಿಶೀಲನೆಗೆ ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತ ನೌಕರರು ಸೆರಿದಂತೆ 15 ಲಕ್ಷ ನೌಕರರಿಗೆ ಅನ್ವಯವಾಗಲಿದೆ. ಎನ್ ಪಿಎಸ್ ಬಗ್ಗೆ ಬೇರೆ ರಾಜ್ಯಗಳಲ್ಲಿ ಅಧ್ಯಯನಕ್ಕೆ ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ಸದ್ಯಕ್ಕೆ ಸರ್ಕಾರಿ ನೌಕರರ ಮುಷ್ಕರ ಹಿಂಪಡೆಯುತ್ತೇವೆ ಎಂದು ಹೇಳಿದ್ದಾರೆ.
ಸರ್ಕಾರಿ ನೌಕರರು, ಸರ್ಕಾರ ತದ್ವಿರುದ್ದವಾಗಿ ಹೋಗುವುದು ಬೇಡ, ಇಬ್ಬರು ಒಟ್ಟಾಗಿ ಹೋಗಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ವೇತನ ಭತ್ಯೆ, ತಾತ್ಕಾಲಿಕ ಪರಿಹಾರ ಸಮ್ಮಿತಿ ನೀಡಿದೆ. ಎನ್ ಪಿಎಸ್ ಅನ್ನು ಒಪಿಎಸ್ ಮಾಡಬೇಕೆಂದು ಬೇಡಿಕೆ ಇಟ್ಟಿದ್ದೇವೆ. ಒಪಿಎಸ್ ಮಾಡುವ ಕುರಿತು ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಬೇಕು ಎಂದು ಹೇಳಿದ್ದಾರೆ ಎಂದರು.