ಬೆಂಗಳೂರು: ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಬಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೇ, ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾವೇ ನಡೆದಿದ್ದು,ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಕಚೇರಿಗೆ ಇಂದು ಕರ್ನಾಟಕ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದ್ರೇ, ಅವರನ್ನು ತಡೆಯೋದಕ್ಕೆ ಬಿಜೆಪಿ ಕಾರ್ಯಕರ್ತರು ಹನುಮಧ್ವಜ ಹಿಡಿದು, ಮೋದಿ ಪರ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ನಡುವೆ ಪರಸ್ಪರ ಮಾತಿನ ಚಕಮಕಿ ತಳ್ಳಾಟದ ಘಟನೆ ನಡೆಯಿತು
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯೋದಕ್ಕೆ ಸ್ಥಳದಲ್ಲಿ ಇದ್ದಂತ ಪೊಲೀಸರು ಹರಸಾಹಸ ನಡೆಸಿದ್ದಾರೆ. ಕೊನೆಗೆ ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ