ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ.ರಾಜೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ
ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಜೆ.ಪ್ರೀತಮ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಇದಲ್ಲದೇ ವಿವಿಧ ಮೋರ್ಚಾಗಳಿಗೂ ನೇಮಕಾತಿಯಾಗಿದ್ದು,
ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್.ಸಿ.ಮೋರ್ಚಾ ಅಧ್ಯಕ್ಷರಾಗಿ ಎಸ್.ಮಂಜುನಾಥ್(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ ರೈತ ಮೋರ್ಚಾ ಅಧ್ಯಕ್ಷರಾಗಿ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ್ ಥಾಮಸ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ