ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಮ್ಯಾರಥಾನ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಅವರು ಚಿನ್ನದ ಪದಕ ಗಳಿಸಿದ್ದಾರೆ.
ಇದರೊಂದಿಗೆ ರೂ.25,000/- ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಇವರು ಪಡೆದಿರುತ್ತಾರೆ.
ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.