Share this news

ಬೆಂಗಳೂರು: ರಾಜ್ಯ ಸರ್ಕಾರ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ) ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅರ್ಹ ಮಹಿಳೆಯರು ಸಲ್ಲಿಸಬೇಕಿರುವ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮೀ ಅರ್ಜಿ ನಮೂನೆಯಲ್ಲಿ ಮೂವರ ಭಾವಚಿತ್ರವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಅರ್ಜಿ ನಮೂನೆಯಲ್ಲಿದೆ.

ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು.

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲಿ ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

2. ಒಂದೇ ಕುಟುಂಬದಲ್ಲಿ ಒಂದಕ್ಕಿAತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.

3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.

4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.

5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

Leave a Reply

Your email address will not be published. Required fields are marked *