ಚಿತ್ರದುರ್ಗ, ಡಿ.30: ರಾಮಮಂದಿರ ಉದ್ಘಾಟನೆ ಎನ್ನುವುದು ಬಿಜೆಪಿಯವರ ಒಂದು ಗಿಮಿಕ್, ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ ದಾಳಿಯನ್ನು ವೈಭವೀಕರಿಸಿ ಗೆದ್ದವರು, ಇದೀಗ ರಾಮನ ಫೋಟೊ ಹಿಡಿದುಕೊಂಡು ಮತ್ತೆ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಸಚಿವ ಡಿ ಸುಧಾಕರ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ಇಂದು ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಗಿಮಿಕ್ ನಿಂದ ಎರಡು ಸಲ ಮೂರ್ಖರಾಗಿದ್ದೇವೆ. ಮತ್ತೆ ಮೂರನೇ ಸಲ ಮೂರ್ಖರಾಗಲು ಜನರು ದಡ್ಡರಾಗಲು ಸಾಧ್ಯವಿಲ್ಲ,ಈಗಲೇ ರಾಮ ಮಂದಿರದ ಲೋಕಾರ್ಪಣೆಯ ಅಗತ್ಯವೇನಿದೆ? ಲೋಕಸಭಾ ಚುನಾವಣೆ ಹಿನ್ನೆಲೆ ರಾಮಮಂದಿರದ ಉದ್ಘಾಟನೆಯಾಗುತ್ತಿದೆ ಎಂದರೆ ಇದು ರಾಜಕೀಯ ಗಿಮಿಕ್ ಅಲ್ಲದೇ ಮತ್ತೇನು ಎಂದು ಸಚಿವ ಸುಧಾಕರ್ ಪ್ರಶ್ನಿಸಿದರು
ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ದುಡ್ಡು ಕೊಟ್ಟಿದ್ದೇವೆ. ಹಿಂದೆಲ್ಲಾ ಇಟ್ಟಿಗೆ ಸಹ ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು ಭಾರತ ದೇಶದ ಧಾರ್ಮಿಕ ನಂಬಿಕೆ ಬಳಸಿಕೊಂಡು ಬಿಜೆಪಿಯವರು ಮತ ಗಾಳ ಹಾಕುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಮ ಮಂದಿರದ ಕುರಿತು ಏನೂ ಮಾತನಾಡದವರು ಈಗ ರಾಮನ ಜಪ ಮಾಡುತ್ತಿದ್ದಾರೆ, ಪುಲ್ವಾಮ ದಾಳಿ ನಡೆದಿದೆ ಎಂದು ಸುಮ್ಮನೆ ಯಾವುದೋ ಯುದ್ದ ವಿಮಾನ ತೋರಿಸಿ ಜನರನ್ನು ವಂಚಿಸಿ ಚುನಾವಣೆ ಗೆದ್ದರು, ಪುಲ್ವಾಮಾ ಘಟನೆಯಲ್ಲಿ ಎಷ್ಟು ಜನರು ಸತ್ತರು? ಪುಲ್ವಾಮಾ ಘಟನೆ ಎನ್ನುವುದೇ ಕೃತಕ ಸೃಷ್ಟಿ ಎಂದು ಪೈಲೆಟ್ ಹೇಳಿಲ್ವಾ ಎಂದು ಪ್ರಶ್ನಿಸಿದರು.
ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ಸರ್ಕಾರದ ಬೇಜವಾಬ್ದಾರಿತನ ಎಂಬ ಎಚ್‌ಡಿ ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಸಚಿವರು, ನಾವು ಸಹ ಶಾಲೆ ವಿದ್ಯಾರ್ಥಿ ಆಗಿದ್ದಾಗ ಕಸಗುಡಿಸಿದ್ದೇವೆ. ಆದರೆ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿಸುವುದು ಸರಿಯಲ್ಲ ಮಕ್ಕಳಿಂದ ಶೌಚಗುಂಡಿ ಕ್ಲೀನ್ ವಿಚಾರ ತಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ