Share this news

ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಸಮ್ಮತಿ ನೀಡಿದೆ.

ಈ ಕುರಿತು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರವು 9 ವರ್ಷಗಳಿಂದ ಈ ವಿಷಯದಲ್ಲಿ ವಿಳಂಬ ಮಾಡುತ್ತಿದೆ ಎಂದು ಸ್ವಾಮಿ ಹೇಳಿದರು.

ಜನವರಿ 19 ರಂದು, ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವೆಂದು ಘೋಷಿಸುವ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

Leave a Reply

Your email address will not be published. Required fields are marked *