ನವದೆಹಲಿ : ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮೋದಿಯವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಅವರು ನಾಗಾಲ್ಯಾಂಡ್’ನ ಕೊಹಿಮಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿ, ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭವು ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕ್ರಮವಾಗಿದೆ ಎಂದು ಪುನರುಚ್ಚರಿಸಿದರು.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ನರೇಂದ್ರ ಮೋದಿಯವರು ಸಂಪೂರ್ಣವಾಗಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದ್ದಾರೆ ಹಾಗಾಗಿ ಕಾಂಗ್ರೆಸ್ ಅಧ್ಯಕ್ಷರು ಸಮಾರಂಭಕ್ಕೆ ಹೋಗುವುದಿಲ್ಲ ಎಂದರು.ಪ್ರಧಾನ ಮಂತ್ರಿಗಳು ಆರೆಸ್ಸೆಸ್ ಕೈಗೊಂಬೆಯಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಸಮಾರಂಭಕ್ಕೆ ಹೋಗುವುದು ನಮಗೆ ಕಷ್ಟವಾಗುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರ ನಿರ್ಮಾಣದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂದರು
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ