Share this news
ನವದೆಹಲಿ: ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.ಆದರೆ ಕರ್ನಾಟಕದಲ್ಲಿ ರಜೆ ‌ನೀಡುವ ಕುರಿತು ಈವರೆಗೆ ಯಾವುದೇ ತೀರ್ಮಾನವಾಗಿಲ್ಲ. ಮೂಲಗಳ ಪ್ರಕಾರ ನಾಳೆ ರಜೆ ನೀಡುವುದು ಅನುಮಾನ ಎನ್ನಲಾಗುತ್ತಿದೆ.

ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜತೆಗೆ ದೆಹಲಿ, ಪುದುಚೇರಿ, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು, ಒಡಿಶಾ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಲಾಗಿದೆ.
ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರಿಸ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಕೂಡ ರಜೆ ಘೋಷಣೆ ಮಾಡಿವೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಕೇಂದ್ರ ಸರಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗಿದ್ದು, ಷೇರುಪೇಟೆಗೂ ರಜೆ ಇರಲಿದೆ. ಕರ್ನಾಟಕದಲ್ಲಿ ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ ನಾಯಕರು ಹಾಗೂ ವಿವಿಧ ಸಂಘಟನೆಗಳು ಮನವಿ ಮಾಡಿದ್ದರೂ ಸರ್ಕಾರ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಒಟ್ಟಿನಲ್ಲಿ ನಾಳೆ ದೇಶಕ್ಕೆ ದೇಶವೇ ರಾಮನ ಭಕ್ತಿಯಲ್ಲಿ ಮಿಂದೇಳಲಿದೆ

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *