Share this news

ರಾಯಚೂರು : ಉತ್ತರ ಪ್ರದೇಶದ ಜ್ಞಾನವ್ಯಾಪಿ ಮಸೀದಿಯಲ್ಲಿ ಇತ್ತೀಚಿಗೆ ಹಿಂದೂ ಧರ್ಮಕ್ಕೆ ಸಂಬಂಧಿಸಿದಂತ ವಿಗ್ರಹಗಳು ಹಾಗೂ ಮೂರ್ತಿಗಳು ಪತ್ತೆಯಾಗಿದ್ದು ಇದೀಗ ಕೋರ್ಟ್ ಕೂಡ ಅಲ್ಲಿ ಪೂಜೆ ಪುನಸ್ಕಾರ ನಡೆಸಲು ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಕೃಷ್ಣಾ ನದಿಯಲ್ಲಿ 11ನೇ ಶತಮಾನದ ಕಲ್ಯಾಣ ಚಾಲುಕ್ಯರ ಕಾಲದ ಕೃಷ್ಣ ಹಾಗೂ ಶಿವಲಿಂಗ ವಿಗ್ರಹಗಳು ಪತ್ತೆಯಾಗಿದೆ.

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳನ್ನು ಸಿಬ್ಬಂದಿ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಮುಳುಗಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ..ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

 

 

 

 

 

 
 

 

 
 

Leave a Reply

Your email address will not be published. Required fields are marked *