ಕಾರ್ಕಳ: ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕದ 17ರ ವಯೋಮಾನದ ಬಾಲಕರ ತಂಡ ಫೈನಲ್ ರೋಚಕ ಪಂದ್ಯದಲ್ಲಿ ಹರ್ಯಾಣ ತಂಡದ ವಿರುದ್ಧ 52-59 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ.
ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಬಾಲಕ ಸೃಜನ್ ಅತ್ಯುತ್ತಮ ಆಟ ಪ್ರದರ್ಶಿಸಿ ಕೀರ್ತಿ ತಂದಿದ್ದಾರೆ. ಗ್ರಾಮೀಣ ಭಾಗದ ಸೃಜನ್ ಅತ್ಯುತ್ತಮ ಆಟಗಾರನಾಗಿದ್ದು ಉತ್ತಮ ತರಬೇತಿ, ಮಾರ್ಗದರ್ಶನ ಹಾಗೂ ಸೌಲಭ್ಯಗಳು ಇಂತಹ ಪ್ರತಿಭೆಗಳಿಗೆ ದೊರೆತರೆ ಗ್ರಾಮೀಣ ಕ್ರೀಡೆ ಕಬಡ್ಡಿ ಇನ್ನಷ್ಟು ಜನಪ್ರಿಯವಾಗಲಿದೆ.
ಕೆಪಿಎಸ್ ಮುನಿಯಾಲಿನ ದೈಹಿಕ ಶಿಕ್ಷಣ ಶಿಕ್ಷಕ ತಾರಾನಾಥ ಶೆಟ್ಟಿ ಹಾಗೂ ಭಾರತಿ ಮಂಜುನಾಥ ನಾಯಕ್ ಮತ್ತು ಎಲ್ಲಾ ಶಿಕ್ಷಕರ ಮಾರ್ಗದರ್ಶನ ಹಾಗೂ ತರಬೇತಿಯಿಂದ ರಾಷ್ಟ್ರ ಮಟ್ಟದಲ್ಲಿ ಬಾಲಕರ ತಂಡದ ಗಮನಾರ್ಹ ಸಾಧನೆ ಮಾಡುವಂತಾಗಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ