ಕಾರ್ಕಳ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾಗಿ ವರ್ಷ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ.
ಕಾರ್ಕಳದ ಸಾಣೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಅಧಿಕಾರಿಗಳ ಎಡವಟ್ಟಿನಿಂದ ನಿತ್ಯ ಒಂದಲ್ಲಾ ಒಂದು ಸಮಸ್ಯೆ ಸೃಷ್ಟಿಯಾಗುತ್ತಿದೆ.
ಸಾಣೂರಿನ ಪಶುಚಿಕಿತ್ಸಾಲಯದ ಬಳಿ ರಸ್ತೆ ಅಗಲೀಕರಣಕ್ಕಾಗಿ ಗುಡ್ಡ ಅಗೆದ ಪರಿಣಾಮವಾಗಿ ಪಶು ಚಿಕಿತ್ಸಾಲಯ ಕೇಂದ್ರ ಕುಸಿಯುವ ಭೀತಿ ಎದುರಾಗಿದೆ.
ಕಳೆದ ಎರಡು ಮೂರು ತಿಂಗಳುಗಳಿAದ ಕಾರ್ಕಳ ಶಾಸಕರು,ಉಡುಪಿ ಎಂಪಿ, ಜಿಲ್ಲಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ದಿಲೀಪ್ ಬಿಲ್ಡ್ ಕಾಲ್ ಕನ್ಸ್ಟ್ರಕ್ಷನ್ ಮ್ಯಾನೇಜರ್ ಇಂಜಿನಿಯರ್ ಗಳು, ಭೂಸ್ವಾಧೀನ ಅಧಿಕಾರಿ ಹಾಗೂ ತಹಶೀಲ್ದಾರ್ ಸೇರಿದಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾಔಉದೇ ಪ್ರಯೋಜನವಾಗಿಲ್ಲ. ಈಗಾಗಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಡಿ ಮಳೆಗೆ ಮಣ್ಣಿನ ಜತೆಗೆ ಪಶು ಚಿಕಿತ್ಸಾಲಯವೂ ಕುಸಿಯುವ ಭೀತಿ ಎದುರಾಗಿದೆ. ಆದ್ದರಿಂದ ಸಂಬAಧಪಟ್ಟವರು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.