ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಟ 20 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಲು ಶ್ರಮಿಸಬೇಕೆಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೈ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಅವರು ಗುರುವಾರ ಯುವ ಕಾಂಗ್ರೆಸ್‌ನ ವಿಸ್ತೃತ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, 2024ರ ಲೋಕಸಭಾ ಚುನಾವಣೆ ನಮ್ಮೆಲ್ಲರ ಗುರಿಯಾಗಿರಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ, ಮುಂಬರುವ ಸಂಸತ್ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ 59 ಸಾವಿರ ಕೋಟಿ ರೂ.ಅನುದಾನವನ್ನು ಗ್ಯಾರಂಟಿ ಯೋಜನೆಗಾಗಿ ಮೀಸಲಿಟಿದೆ. ಈ ಅನುಮಾನಕ್ಕೆ ಸಂಪನ್ಮೂಲ ಕ್ರೋಢೀಕರಣಕ್ಕೆ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ.ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದರು.
ಇದಲ್ಲದೇ ಸರ್ಕಾರದ ಗ್ಯಾರಂಟಿ ಯೋಜನೆಗಳ ನೋಂದಣಿಗೆ ಯಾವುದೇ ಶುಲ್ಕ ಪಡೆಯುವಂತಿಲ್ಲ ಹಣ ವಸೂಲಿ ಮಾಡಿದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಸಿದರು.

