ನವದೆಹಲಿ ಡಿ.17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಮೊದಲು ಭಾರತ್ ಜೋಡೋ ಪಾದಯಾತ್ರೆ ನಡೆಸಿ ಭರ್ಜರಿ ಯಶಸ್ಸು ಗಳಿಸಿದ ಬೆನ್ನಲ್ಲೇ ಇದೀಗ ಭಾರತ್ ಜೋಡಿ ಯಾತ್ರೆ 2.0 ಆರಂಭಿಸಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ
ಈಗಾಗಲೇ ಎಲ್ಲಾ ಸಿದ್ಧತೆಗಳು ಅಂತಿಮವಾಗಿದ್ದು ಮುಂದಿನ ತಿಂಗಳು ರಾಹುಲ್ ಗಾಂಧಿ ಈ ಯಾತ್ರೆ ಆರಂಭಿಸಲಿದ್ದಾರೆ. ನಿರುದ್ಯೋಗ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಈಶಾನ್ಯದಿಂದ ಈ ಯಾತ್ರೆ ಪ್ರಾರಂಭಿಸುವ ಸಾಧ್ಯತೆಯಿದೆ
ಮುಂಬರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಸಿಡಬ್ಲ್ಯೂಸಿ ಸಭೆಯನ್ನು ಕೂಡ ನಡೆಸಲಿದೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ 2.O ಭಾರೀ ಮಹತ್ವ ಪಡೆದುಕೊಳ್ಳುವ ಸಾಧ್ಯತೆಯಿದೆ.