ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ.
ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದರೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆಗೆ (ಫೆ.23) ಕಾಯ್ದಿರಿಸಿದೆ.
ಡಿ.ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ(ಗುರುವಾರ) ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.