ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ ,ಪ್ರವೀಣ್ ಶೆಟ್ಟಿ ಹಾಗೂ ಜೀವನ್ ಮುಂದಾಳುತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು .
ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲು, ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್, ಸುಭಿತ್ ಎನ್.ಆರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಪುರಸಭೆ ಸದಸ್ಯರಾದ ಪ್ರತಿಮಾ ರಾಣೆ, ನಳಿನಿ ಆಚಾರ್ಯ,ನಗರ ಮಹಿಳಾ ಅಧ್ಯಕ್ಷೆ ಕಾಂತಿ ಶೆಟ್ಟಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.