ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಪ್ರಚಾರದ ಭರಾಟೆ ಜೋರಾಗಿದ್ದರೆ, ಇನ್ನು ಕೆಲವರು ತಮ್ಮ ಕ್ಷೇತ್ರಗಳನ್ನ ಭದ್ರಗೊಳಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಈ ನಡುವೆಯೇ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಕೇಂದ್ರದ ನಾಯಕರು ಆಗಾಗ ರಾಜ್ಯಕ್ಕೆ ಬೇಟಿ ನೀಡುತ್ತಿದ್ದಾರೆ.
4-6 ಶಾಸಕರಿಗೆ ಟಿಕೆಟ್ ಇಲ್ಲ ಎಂದು ಬಿ. ಎಸ್ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸರ್ವೆ ಆಧಾರದ ಮೇಲೆ ಬಿಜೆಪಿ ಟಿಕೆಟ್ ಹಂಚಿಕೆ ಮಾಡಲಾಗುತ್ತೆ. ಬಿ.ಎಸ್ ಯಡಿಯೂರಪ್ಪ ರಾಜಕೀಯ ಅನುಭವದ ಮೇಲೆ ಹೇಳಿದ್ದಾರೆ. ಅವರ ಮಾತನ್ನು ಅಲ್ಲಗಳೆಯಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಂದು ಸಂಸದೆ ಸುಮಲತಾ ನಿರ್ಧಾರ ಪ್ರಕಟ ಮಾಡುತ್ತಾರೆ. ಸುಮಲತಾ ನಿನ್ನೆ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಮುಂದೇನು ಎಂಬುದು ಅವರು ಇಂದು ತಿಳಿಸಲಿದ್ದಾರೆ ಎಂದರು.