ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಅಭ್ಯರ್ಥಿಗಳ ಆಯ್ಕೆ ಕುರಿತು ಪರಾಮರ್ಶೆ ನಡೆಸುತ್ತಿದೆ.
ಈಗಾಗಲೇ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳನ್ನು ಗೆದ್ದಿರುವ ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ನಡೆಸುತ್ತಿದೆ.
ಗೆಲ್ಲಬಹುದಾದ ಅಭ್ಯರ್ಥಿಗಳ ಕರಡು ಪಟ್ಟಿಯನ್ನು ಸಿದ್ದಪಡಿಸುತ್ತಿರುವ ಬಿಜೆಪಿ ಮುಂದಿನ ಜನವರಿ ಮೊದಲ ವಾರದೊಳಗೆ ತನ್ನ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಎನ್ ಡಿಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಲಾಗಿದ್ದು, ಈ ಬಾರಿ ಅವರನ್ನು ಗೆಲ್ಲಿಸಬೇಕೆನ್ನುವ ನಿಟ್ಟಿನಲ್ಲಿ ಹೊಸಬರಿಗೆ ಮಣೆ ಹಾಕಲಾಗುತ್ತದೆ ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ಇಲ್ಲವೆಂದು ಈ ಮೊದಲು ನಿರ್ಧರಿಸಲಾಗಿತ್ತು.
ಒಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿ ಕೂಟ ಹಾಗೂ ಎನ್ ಡಿಎ ಒಕ್ಕೂಟದ ನಡುವೆ ಜಿದ್ದಾಜಿದ್ದಿನ ಹೋರಾಟಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ಇಂಡಿಯಾ ಒಕ್ಕೂಟವು ಕೂಡ ಈ ಬಾರಿ ಶತಾಯಗತಾಯ ಕೇಂದ್ರದಲ್ಲಿ ಅಧಿಕಾರ ಹಿಡಿಯಲೇಬೇಕನ್ನುವ ರಣೋತ್ಸಾಹದಲ್ಲಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ