Share this news

ನವದೆಹಲಿ:ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅಧ್ಯಕ್ಷತೆಯಲ್ಲಿ ಒಟ್ಟು 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ಕಲ್ಪಿಸಲಾಗಿದೆ.

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ.ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷವು ಶೀಘ್ರದಲ್ಲೇ ಸಮಿತಿಗಳನ್ನು ರಚಿಸಲಿದೆ ಎಂದು ಹೇಳಿದ್ದರು. ಲೋಕಸಭೆ ಸ್ಥಾನಕ್ಕೆ ವೀಕ್ಷಕರನ್ನು ನೇಮಿಸುವುದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷವು ಸ್ಕ್ರೀನಿಂಗ್ ಸಮಿತಿಯನ್ನು ಸಹ ರಚಿಸಲಿದೆ.
ಕಳೆದ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳ ಭರವಸೆ ನೀಡುವ ಮೂಲಕ ಅಧಿಕಾರ ಪಡೆದಿದ್ದ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಅಂತಹುದೇ ಗ್ಯಾರಂಟಿಗಳ ಅಸ್ತ್ರ ವನ್ನು ಬಳಕೆ ಮಾಡುವ ಸಲುವಾಗಿ ಈಗಿನಿಂದಲೇ ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತದಾರರಿಗೆ ಭರ್ಜರಿ ಆಫರ್ ಗಳನ್ನು ನೀಡುವ ಮೂಲಕ ಮತದಾರರ ಮ(ತ)ನ ಗೆಲ್ಲುವ ತಂತ್ರಗಾರಿಕೆ ರೂಪಿಸಿದರೂ ಅಚ್ಚರಿಯಿಲ್ಲ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *