ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ.
ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ಹಠಾತ್ ಕಾಂಗ್ರೆಸ್ ತೊರೆದ ಹಿನ್ನೆಲೆಯಲ್ಲಿ ಕೈ ನಾಯಕರು ವಿಚಲಿತರಾಗಿದ್ದು, ಶೆಟ್ಟರ್ ಪಕ್ಷದ ಬಿಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಭಾಗದ ಲಿಂಗಾಯತ ಸಮುದಾಯದ ಮತಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ