Share this news

ಸೊರಬ: ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹೊತ್ತಲ್ಲಿ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮಿಕ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲದಲ್ಲಿ ಚುನಾವಣೆ ಗೆಲುವಿಗೆ ಏನಿದ್ದರೂ ಅಭಿವೃದ್ಧಿಯ ಜಪವೇ ಹೊರತು ರಾಮಜಪ ಅಲ್ಲವೆಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಸೊರಬದ ಬಂಗಾರಧಾಮದಲ್ಲಿ ಯುವನಿಧಿ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದ ಜಾಗತಿಕ ಮಟ್ಟದಲ್ಲಿ ದೇಶದ ಸಂಸ್ಕೃತಿ ಎತ್ತಿಹಿಡಿದಿದ್ದಾರೆ. ಅವರ ಜನ್ಮದಿನದಂದು ಯುವಜನತೆಗೆ ಸ್ಫೂರ್ತಿಯಾಗಿ ರಾಜ್ಯ ಸರ್ಕಾರ ಯುವನಿಧಿ ಹೆಸರಿನಲ್ಲಿ 5ನೇ ಗ್ಯಾರಂಟಿ ಜಾರಿಗೊಳಿಸುತ್ತಿದೆ. ಪದವೀಧರರಿಗೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು. ಅರಣ್ಯ ಭೂಮಿಯಲ್ಲಿ ಶೇ.70ರಷ್ಟು ಜನರು ವಾಸವಾಗಿದ್ದಾರೆ. ಸರ್ಕಾರ ಅರಣ್ಯ ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿದೆ. ಸಾಕಷ್ಟು ಗ್ರಾಮದ ರೈತರಿಗೆ ಅರಣ್ಯ ಇಲಾಖೆಯಿಂದ ನೋಟಿಸ್ ನೀಡಿರುವ ಮಾಹಿತಿಯಿದೆ. ಯಾವುದೇ ರೈತರು ಅರಣ್ಯ ಮತ್ತು ಬಗರ್‌ಹುಕುಂ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದರು.

ತಾಲೂಕಿನ ಜನರ ಸಂಪೂರ್ಣ ಬೆಂಬಲ ಇರುವವರೆಗೆ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಬದುಕಿರುವವರೆಗೂ ಕ್ಷೇತ್ರದ ಜನರ ರಕ್ಷಣೆ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತೇನೆ. ಜ.15ರ ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಸಾರ್ವಜನಿಕ ಸಮಸ್ಯೆಗಳನ್ನು ಅರಿತು, ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *