Share this news

ಬೆಂಗಳೂರು: ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದ ಆರೋಪದ ಮೇಲೆ ವಿಚಾರಣೆಗೆ ಹಾಜರಾಗುವಂತೆ ಇಂಡಿಯನ್​ಮನಿ ಫ್ರೀಡಂ ಆ್ಯಪ್​​ (Indian money freedom app) ಸಿಇಒ ಸಿಎಸ್ ಸುಧೀರ್​ಗೆ  ಬನಶಂಕರಿ ಪೊಲೀಸರು ನೋಟಿಸ್​​ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಸುಧೀರ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ 3 ದಿನಗಳ ಒಳಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಸುಧೀರ್ ಮತ್ತವರ ತಂಡದ ವಿರುದ್ಧ ನಯನಾ ಎಂಬ ಮಹಿಳೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಮಧ್ಯೆ, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಮೊರೆ ಹೋಗಿರುವ ಸುಧೀರ್ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಹೀಗಾಗಿ ಅವರು ಬಂಧನ ಭೀತಿಯಿಂದ ಬಚಾವಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಮಧ್ಯೆ, ಸುಧೀರ್ ವಿರುದ್ಧ ಒಟ್ಟು 21 ಮಂದಿ ದೂರು ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿಗಳಾದ ಸುಧೀರ್ ಹಾಗೂ ಇತರರು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಆದರೆ, ಜಾಮೀನು ನೀಡುವ ವೇಳೆ, ವಿಚಾರಣೆಗಾಗಿ ತನಿಖಾಧಿಕಾರಿ ಎದುರು ಹಾಜರಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸುಧೀರ್ ಹಾಗೂ ಇತರರು, ವಂಚಿಸುವ ಉದ್ದೇಶದಿಂದ ಸಂಚು ರೂಪಿಸಿ ಆ್ಯಪ್‌ ಅಭಿವೃದ್ಧಿಪಡಿಸಿದ್ದರು. ಆ್ಯಪ್‌ ಪ್ರಚಾರಕ್ಕಾಗಿ ಅಮಾಯಕ ಯುವ ಯುವತಿಯರನ್ನು ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

Leave a Reply

Your email address will not be published. Required fields are marked *