ಕಾರ್ಕಳ: ಹೆಬ್ರಿ ತಾಲೂಕಿನ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ರವಿ ಪೂಜಾರಿ (55) ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.
ರವಿ ಪೂಜಾರಿಯವರು ಎರಡು ಅವಧಿಗೆ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ಇತ್ತೀಚೆಗೆ ನಡೆದ ಸಂಘದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ರವಿ ಪೂಜಾರಿ ವರಂಗ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರವಿ ಪೂಜಾರಿಯವರು ಸರಳ ಹಾಗೂ ಸಾಧು ಸ್ವಭಾವದ ವ್ಯಕ್ತಿಯಾಗಿದ್ದು, ಇವರ ಅಗಲಿಕೆ ಸಹಕಾರಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಮೃತರು ಪತ್ನಿ,ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.