Share this news

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆಗಳನ್ನು ಗೌರವಸೂಚಕವಾಗಿ ನೀಡಬೇಕು ಎಂದು ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಇದೇ ತಿಂಗಳ 25ರಂದು ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಇದ್ದು, ಅಂದು ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲು ಮಹಿಳೆಯರು ಆಗಮಿಸುತ್ತಾರೆ. ಈ ವೇಳೆ ದೇವಾಲಯಗಳು ತಮ್ಮ ನಿಧಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ, ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡಬೇಕು. ಪ್ರಸಾದ ರೂಪವಾದ ಅರಿಶಿಣ-ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊAದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ವಿತರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *