ಮಧ್ಯಪ್ರದೇಶ: ಭಾರತದಲ್ಲಿ ಮುಸ್ಲಿಂ ಮಹಿಳೆಯರಿಗೆ ವೈವಾಹಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿದೆ. ಆದರೆ ಮಧ್ಯಪ್ರದೇಶದ ಇಂದೋರ್ನಲ್ಲಿ ವಾಟ್ಸಾಪ್ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಪತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಸೆಂಬರ್ 18 ರಂದು ತನ್ನ ಹೆಂಡತಿಗೆ ವಾಟ್ಸಾಪ್ನಲ್ಲಿ ವಾಯ್ಸ್ ನೋಟ್ ಕಳುಹಿಸಿದ್ದು, ಮೂರು ಬಾರಿ ತಲಾಖ್ ಹೇಳಿದ್ದಾನೆ ಎಂದು ಆತನ ಪತ್ನಿ ಆರೋಪಿಸಿದ್ದಾಳೆ.
ಪತ್ನಿ ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ರಾವೋಜಿ ಬಜಾರ್ ಪೊ ದಂಪತಿಗೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು ಓರ್ವ ಮಗಳಿದ್ದಾಳೆ.ಮದುವೆಯಾದ ಮೂರು ತಿಂಗಳ ನಂತರ ಪತಿ ತನಗೆ ಕಿರುಕುಳ ನೀಡಲಾರಂಭಿಸಿದ ಮತ್ತು ಗರ್ಭಿಣಿಯಾದಾಗ ತನ್ನ ಚಾರಿತ್ರ್ಯ ಹರಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದು,ಈತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ