ನವದೆಹಲಿ : ಇತ್ತೀಚೆಗಷ್ಟೇ ಮೋದಿ ಸರ್ಕಾರ ರಕ್ಷಾಬಂಧನ ಹಬ್ಬದ ಪ್ರಯುಕ್ತ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 200 ರೂ. ಕಡಿತಗೊಳಿಸಿತ್ತು. ಇದೀಗ ದೇಶದ ಜನತೆಗೆ ಮತ್ತೊಂದು ಒಳ್ಳೆಯ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್ 1 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಪರಿಷ್ಕೃತವಾಗಿದ್ದು, ಇಂದು ಬೆಲೆ ಮತ್ತಷ್ಟು ಇಳಿಕೆಯಾಗಿದೆ.
ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಹೊಸ ದರಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತವೆ. ಆಗಸ್ಟ್‌ನಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಒಎಂಸಿಗಳು 99.75 ರೂ.ನಷ್ಟು ಕಡಿತಗೊಳಿಸಿದ್ದವು. ಜುಲೈನಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ತಲಾ 7ರೂ. ಹೆಚ್ಚಿಸಲಾಗಿತ್ತು .
ಈ ಏರಿಕೆಗೆ ಮೊದಲು, ಈ ವರ್ಷದ ಮೇ ಮತ್ತು ಜೂನ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ OMC ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 172ರೂ. ಕಡಿಮೆ ಮಾಡಿದ್ದರೆ, ಜೂನ್‌ನಲ್ಲಿ 83 ರೂ. ಕಡಿಮೆ ಮಾಡಲಾಗಿದೆ. ಏಪ್ರಿಲ್‌ನಲ್ಲಿಯೂ ಅವುಗಳ ಬೆಲೆ ಪ್ರತಿ ಯೂನಿಟ್‌ಗೆ 91.50ರೂ. ನಷ್ಟು ಕಡಿಮೆಯಾಗಿದೆ .