ಮುಂಬಯಿ:ವಿಚ್ಛೇದಿತ ಮುಸ್ಲಿಂ ಮಹಿಳೆಯರು ತಮ್ಮ ಮಾಜಿ ಪತಿಯಿಂದ ಬೇಷರತ್ತಾದ ಜೀವನಾಂಶವನ್ನು ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಇದಲ್ಲದೆ, ಎರಡನೇ ಮದುವೆಯ ನಂತರವೂ ಮಹಿಳೆಯರು ತಮ್ಮ ಮೊದಲ ಪತಿಯಿಂದ ನ್ಯಾಯಯುತ ಮೊತ್ತವನ್ನು ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ.
ಮುಸ್ಲಿಂ ಮಹಿಳೆಯ ವಿಚ್ಛೇದನ ಹಕ್ಕುಗಳ ರಕ್ಷಣೆ ಕಾಯ್ದೆಯ ಸೆಕ್ಷನ್ 3 (1) (ಎ) ಮರುವಿವಾಹವನ್ನು ಉಲ್ಲೇಖಿಸುವುದಿಲ್ಲ ಎಂದು ನ್ಯಾಯಮೂರ್ತಿ ರಾಜೇಶ್ ಪಾಟೀಲ್ ಅವರ ಏಕಸದಸ್ಯ ಪೀಠ ಹೇಳಿದೆ. ಆದ್ದರಿಂದ, ಮುಸ್ಲಿಂ ಮಹಿಳೆಯರು ಜೀವನಾಂಶಕ್ಕಾಗಿ ವಿಚ್ಛೇದಿತ ಮೊದಲ ಪತಿಯಿಂದ ಹಣವನ್ನು ಕೇಳಲು ಅರ್ಹರಾಗಿದ್ದಾರೆ ಎಂದು ತೀರ್ಪು ನೀಡಿದೆ.
ಈ ಕಾಯ್ದೆಯು ಮುಸ್ಲಿಂ ಮಹಿಳೆಯರ ಬಡತನವನ್ನು ತಡೆಗಟ್ಟಲು ಮತ್ತು ವಿಚ್ಛೇದನದ ನಂತರವೂ ಸಾಮಾನ್ಯ ಜೀವನವನ್ನು ನಡೆಸುವ ಹಕ್ಕನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತದೆ. ಮರುವಿವಾಹದ ಆಧಾರದ ಮೇಲೆ ಮಾಜಿ ಪತ್ನಿಗೆ ನೀಡಲಾಗುವ ರಕ್ಷಣೆಯನ್ನು ಸೀಮಿತಗೊಳಿಸುವ ಉದ್ದೇಶವನ್ನು ಈ ಕಾಯ್ದೆ ಹೊಂದಿಲ್ಲ.ವಿವಾಹಿತ ಮಹಿಳೆಯರ ಆಸ್ತಿ ಕಾಯ್ದೆ ಅಡಿಯಲ್ಲಿ, ವಿಚ್ಛೇದಿತ ಮಹಿಳೆ ತನ್ನ ಮರುವಿವಾಹವನ್ನು ಲೆಕ್ಕಿಸದೇ ಜೀವನಾಂಶಕ್ಕೆ ಅರ್ಹಳಾಗಿದ್ದಾಳೆ ಎಂದು ನ್ಯಾಯಾಲಯ ಹೇಳಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ