Share this news

ವಿಜಯಪುರ : ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ ಬಗ್ಗೆ ನಾವು ಮಾತನಾಡಬೇಕು. ಈ ವಿಷಯವನ್ನು ಪರ್ತಕರ್ತರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ 37ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್, ಟಿವಿ9 ಸುದ್ದಿ ವಾಚಕಿ ಸುಕನ್ಯಾ, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿಯವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಪತ್ರಕರ್ತರು ಹಾಗೂ ರಾಜಕಾರಣಿಗಳದ್ದು ಅವಿನಾಭಾವ ಸಂಬAಧ ಪರಸ್ಪರರನ್ನು ಬಿಟ್ಟು ಕೆಲಸ ಮಾಡಲಾಗುವುದಿಲ್ಲ. ಸುದ್ದಿಯನ್ನು ಬಿಂಬಿಸುವ ಮೂಲಕ ನಮ್ಮ ಅಭಿಪ್ರಾಯಗಳನ್ನು ಬಿಂಬಿಸಿ, ಅಭಿಪ್ರಾಯಗಳ ಮೂಲಕ ನಮ್ಮ ವ್ಯಕ್ತಿತ್ವ ಮೂಡಿಸಲು ಪತ್ರಕರ್ತರು ಕಾರಣ. ರಾಜಕಾರಣಿಗಳು ಮತ್ತು ಪತ್ರಕರ್ತರ ನಡುವೆ ಆರೋಗ್ಯಕರವಾದ ಸಂಬAಧವಿದ್ದರೆ ರಾಜ್ಯದ ರಾಜಕಾರಣ ಹಾಗೂ ಆಡಳಿತ ಉತ್ತಮವಾಗಿರುತ್ತದೆ. ಪತ್ರಿಕೋದ್ಯಮ ಬಹಳಷ್ಟು ಬದಲಾವಣೆ ಕಂಡಿದೆ. ಪ್ರತಿಯೊಬ್ಬ ಓದುಗನೂ ಪರ್ತಕರ್ತನಾಗಿದ್ದಾನೆ. ಇಂಥ ಸಂದರ್ಭದಲ್ಲಿ ಪತ್ರಿಕೋದ್ಯಮವನ್ನು ಉಳಿಸಿಕೊಂಡು ಪರ್ತಕರ್ತರ ವೃತ್ತಿಯನ್ನು ಗಟ್ಟಿಗೊಳಿಸುವುದು ಸವಾಲಿನ ಕೆಲಸ. ವಿಶ್ವಾಸಾರ್ಹತೆ ಹಾಗೂ ಸಹಮತದಿಂದ ಇದು ಸಾಧ್ಯವಿದೆ. ಇದು ರಾಜಕಾರಣಿಗಳಿಗೂ ಅನ್ವಯವಾಗುತ್ತದೆ ಎಂದರು.

ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ನೀಡಬೇಕೆಂಬ ಬೇಡಿಕೆ ಇದೆ. ಗ್ರಾಮೀಣ ಪತ್ರಕರ್ತರ ಬಗ್ಗೆ ಮಾಹಿತಿಯನ್ನು ಪತ್ರಕರ್ತರ ಸಂಘದವರು ಮಾಹಿತಿ ಸರಿಯಾಗಿ ನೀಡಿದರೆ, ಖಂಡಿತವಾಗಿಯೂ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದರು. ನಿವೃತ್ತ ಪತ್ರಕರ್ತರಿಗೆ ಮಾಸಾಸನವನ್ನು ಹೆಚ್ಚಳ ಮಾಡಲು ಕೋರಿದ್ದು, ಈ ಬಾರಿಯ ಬಜೆಟ್ ನಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಪರ್ತಕರ್ತರಿಗೆ ನಿವೇಶನ ನೀಡುವ ಬಗ್ಗೆ ಭರವಸೆ ನೀಡಿದರಲ್ಲದೇ ಜಾಹೀರಾತುಗಳ ದರ ಪರಿಷ್ಕರಣೆಗೆ ಆದೇಶ ನೀಡಲಾಗಿದೆ. ಪರಿಷ್ಕರಣೆ ಆದ ಕೂಡಲೇ ಕ್ರಮ ವಹಿಸಲಾಗುವುದು. ಯಶಸ್ವಿನಿ ವ್ಯಾಪ್ತಿಗೆ ಪರ್ತಕರ್ತರನ್ನು ತರಲು ಕೂಡ ಪರಿಶೀಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ.ಪಾಟೀಲ್, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *