ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರಿಂದ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.
ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಬಂಧಿತ ಆರೋಪಿಗಳಾಗಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
2019 ರಿಂದ ಈ ಬಾಲಕಿಯ ಮೇಲೆ ನಿರಂತರವಾಗಿ ವಿವಿಧ ಕಡೆಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಲಾಗಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.