ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಅವಘಡಗಳು ಸಂಭವಿಸಿ ಜನರು ಸಾವನ್ನಪ್ಪುತ್ತಿದ್ದು ಇದು ಅತ್ಯಂತ ಖಂಡನೀಯ, ಇದಕ್ಕೆ ಬೇಜವಾಬ್ದಾರಿ ಇಂಧನ ಇಲಾಖೆಯ ಸಚಿವರೇ ನೇರ ಹೊಣೆಗಾರರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲ್‍ಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ವರ್ತೂರಿನಲ್ಲಿ ಬಾಲಕಿಯೊಬ್ಬಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾಳೆ. ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆಯ ವಿಚಾರದಲ್ಲಿ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆರೋಪಗಳಿವೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ದುರ್ಘಟನೆ ನಡೆದ ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಆಕೆ ಮೃತ ಪಟ್ಟಿದ್ದಾಳೆ. ಇದೇ ಅಪಾರ್ಟ್‍ಮೆಂಟಿನಲ್ಲಿ ಮೂರು ತಿಂಗಳ ಹಿಂದೆ ಬಾಲಕಿಗೆ ಕರೆಂಟ್ ಶಾಕ್ ಹೊಡೆದಿತ್ತು ಆದರೆ, ಆಕೆ ಅದೃಷ್ಟವಶಾತ್ ಬಚಾವಾಗಿದ್ದಳು, ಘಟನಾ ಸ್ಥಳದಲ್ಲಿ ನಿನ್ನೆವೆರೆಗೂ ಇದ್ದ ಸಿಸಿಟಿವಿ ವ್ಯವಸ್ಥೆಯನ್ನು ತೆಗೆದಿದ್ದಾರೆ ಎಂಬ ಮಾಹಿತಿಯೂ ಲಭಿಸಿದೆ ಎಂದು ವಿವರಿಸಿದ್ದಾರೆ.
ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಪ್ರವಹಿಸಿ ತಾಯಿ ಮತ್ತು ಒಂಬತ್ತು ತಿಂಗಳ ಮಗು ಮೃತಪಟ್ಟಿದ್ದರು. ಈ ಆಘಾತಕಾರಿ ಘಟನೆಯ ಕಹಿನೆನಪು ಮಾಸುವ ಮುನ್ನವೇ ಇನ್ನೊಂದು ದುರ್ಘಟನೆ ಸಂಭವಿಸಿದೆ. ವಿದ್ಯುತ್ ಸಚಿವರು ಇದಕ್ಕೆ ನೇರ ಹೊಣೆಗಾರರು ಎಂದು ತಿಳಿಸಿದ್ದಾರೆ. ಈ ವಿಚಾರದಲ್ಲಿ ಸರಕಾರವು ಯಾವುದೇ ವರದಿ ನೀಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ