Share this news

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯಡಿ ಮನೆಮನೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಯಾಗಿರುವ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಚತ್ತಿ ನಿಯಂತ್ರಣ ಆಯೋಗವು ರಾಜ್ಯಾದ್ಯಂತ ಎಲ್ಲಾ ವರ್ಗದ ಗ್ರಾಹಕರಿಗೆ ಪ್ರಿ ಪೈಪೇಡ್ ಸ್ಮಾರ್ಟ್ ಮೀಟರ್ ಅಳವಡಿಸಲು ಕರಡು ನಿಯಮ ರೂಪಿಸಿ ಅಧಿಸೂಚನೆ ಹೊರಡಿಸಿದೆ.


ಆಯೋಗದ ಈ ನಿಯಮದಿಂದ ಎಸ್ಕಾಂಗಳಿಗೆ ವಾರ್ಷಿಕ ಭದ್ರತಾ ಠೇವಣಿ ಪಾವತಿಗೆ ಹೆಚ್ಚಿನ ಉಳಿತಾಯಕ್ಕೆ ಸಹಾಯವಾಗಲಿದ್ದು, ಪ್ರಿಪೇಡ್ ಮೀಟರ್ ಅಳವಡಿಕೆಯಿಂದ ಬಿಲ್ಲಿಂಗ್ ಸಮಯದಲ್ಲಿ ವಿದ್ಯುತ್ ಬಳಕೆಯನ್ನು ತಿದ್ದಲು ಸಾಧ್ಯವಿಲ್ಲ.ಪ್ರಿಪೇಡ್ ವಿದ್ಯುತ್ ಮೀಟರ್ ಗಳಿಗೆ ಪ್ರಿಪೇಡ್ ಕರೆನ್ಸಿ ರೀಚಾರ್ಜ್ ಮಾಡಬಹುದಾಗಿದ್ದು ಈ ಸ್ಮಾರ್ಟ್ ಮೀಟರ್‌ಗಳನ್ನು ಸ್ಮಾರ್ಟ್ ಫೋನ್‌ಗಳಿಗೆ ಲಿಂಕ್ ಮಾಡಲಾಗಿದೆ ಮತ್ತು ಪ್ರತಿ ತಿಂಗಳ ವಿದ್ಯುತ್ ಕೋಟಾ ಖಾಲಿಯಾದಾಗ ಗ್ರಾಹಕರಿಗೆ ಸಂದೇಶ ರವಾನೆಯಾಗಲಿದೆ.ಅಲ್ಲದೇ ಹೆಚ್ಚುವರಿ ವಿದ್ಯುತ್ ಬಳಕೆಗಾಗಿ ರಿಚಾರ್ಜ್ ಮಾಡಬಹುದಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ಕಳೆದ 2021ರಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. ಗ್ರಾಹಕರು ಪ್ರಿಪೇಡ್ ಮೀಟರ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಆಯೋಗ ತಿಳಿಸಿದೆ. ಮೀಟರ್ ಬೆಲೆ ಸಾಮರ್ಥ್ಯದ ಆಧಾರದ ಮೇಲೆ ನಿಗಿದಯಾಗಿರುತ್ತದೆ. ಆರಂಭಿಕ 6,000-13,000 ವರೆಗೆ ಇರಲಿದ್ದು, ಇದರಿಂದ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಬುಧವಾರ ಈ ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ. ಆಯೋಗದ ಈ ಕ್ರಮದಿಂದ ತಿಂಗಳ ವಿದ್ಯುತ್ ಬಳಕೆಯ ನಿರ್ವಹಣೆಗೆ ಅನುಕೂಲವಾಗಲಿದೆ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *