Share this news

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವಿದ್ಯತ್‌ ದರವನ್ನು ಹೆಚ್ಚಳ ಮಾಡಲಾಗಿದ್ದು, ಎರಡು ತಿಂಗಳ ಬಿಲ್‌ ಅನ್ನು ಒಟ್ಟಿಗೆ ನೀಡಿದ್ದರಿಂದ ಸಮಸ್ಯೆಯಾಗಿದೆ. ಮುಂದಿನ ತಿಂಗಳಿಂದ ಸರಿಹೋಗಲಿದೆ. ಆದರೆ, ವಿದ್ಯುತ್‌ ದರವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.. ಆದರೆ, ಇದಕ್ಕೆ ವಿರೋಧ ಮಾಡುತ್ತಿರುವ ಕರ್ನಾಟಕ ವಾಣಿಜ್ಯೋದ್ಯಮ  ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ) ಯಿಂದ ಜೂ.22ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡು ತಿಂಗಳ ಬಿಲ್ ಒಟ್ಟಿಗೆ ಬಂದಿದೆ. ಅದರಿಂದ ಜಾಸ್ತಿ ಬಿಲ್ ಬಂದಿದೆ. ಮುಂದಿನ ತಿಂಗಳಿAದ ಸರಿಯಾದ ಬಿಲ್ ಬರುತ್ತದೆ. ವಿದ್ಯುತ್ ದರ ಹೆಚ್ಚಳದಿಂದಾಗಿ ಎಫ್‌ಕೆಸಿಸಿಐ ಬಂದ್ ಗೆ ನಿರ್ಧಾರ ಮಾಡಿದೆ. ಇಂಧನ ಅಧಿಕಾರಿಗಳಲ್ಲಿ ಎಫ್‌ಕೆಸಿಸಿಐ ಯವರ ಬಳಿ ಮಾತನಾಡಲು ಹೇಳಿದ್ದೇನೆ ಎಂದರು.

ರಾಜ್ಯದಲ್ಲಿ ಜನಸಾಮಾನ್ಯರಿಗೆ ಗೃಹಜ್ಯೋತಿ ಯೋಜನೆಯನ್ನು ಜಾರಿಗೊಳಿಸಿದ ಬೆನ್ನಲ್ಲೇ ಕರ್ನಾಟಕ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಸರ್ಕಾರದ ವಿರುದ್ದ ಬೀದಿಗಿಳಿಯಲು ನಿರ್ಧರಿಸಿದೆ. ವಿದ್ಯುತ್ ದರ ಏಕಾಏಕಿ ಪರಷ್ಕರಣೆ ಮಾಡಿರುವುದನ್ನು ವಿರೋಧಿಸಿ ಜೂ.22ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗಳು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿವೆ. ಅಂದು ಎಲ್ಲಾ ರೀತಿಯ ವಹಿವಾಟುಗಳಿಗೆ ಬ್ರೇಕ್ ಹಾಕಿ ಸರ್ಕಾರಕ್ಕೆ ಒತ್ತಡ ತರಲು ನಿರ್ಧಾರ ಮಾಡಲಾಗಿದೆ

Leave a Reply

Your email address will not be published. Required fields are marked *