ಬೆಂಗಳೂರು: ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜುಲೈ 1ರಿಂದಲೇ ಜಾರಿಗೊಳಿಸಿದೆ. ಆದರೆ ಹಳೆ ಬಿಲ್ ಬಾಕಿ ಇರಿಸಿದ ಗ್ರಾಹಕರಿಗೆ ಈ ಯೋಜನೆಯ ಲಾಭ ಸಿಗುವ ಕುರಿತು ಎದ್ದಿರುವ ಗೊಂದಲಕ್ಕೆ ಇಂಧನ ಸಚಿವ ಕೆ.ಜೆ ಜಾರ್ಜ್ ತೆರೆ ಎಳೆದಿದ್ದಾರೆ. ಗ್ರಾಹಕರು ವಿದ್ಯುತ್ ಬಿಲ್ ಹಿಂಬಾಕಿ ಇರಿಸಿಕೊಂಡಿದ್ದರೂ ಗೃಹ ಜ್ಯೋತಿಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಕೆ.ಜೆ ಜಾರ್ಜ್, ಗೃಹ ಜ್ಯೋತಿ ಯೋಜನೆಂiÀ ಸೌಲಭ್ಯ ಪಡೆಯಲು ಹಿಂಬಾಕಿ ಪಾವತಿಸುವುದು ಕಡ್ಡಾಯಗೊಳಿಸಲಾಗಿದೆ ಆದರೆ ಇದಕ್ಕಾಗಿ ಮೂರು ತಿಂಗಳ ಕಾಲಾವಕಾಶ ನೀಡಲಾಗಿದ್ದು ಸೆ 30ರೊಳಗೆ ಹಿಂಬಾಕಿ ಪಾವತಿಸಿದರೆ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ
ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ ದಿನಾಂಕದಿAದ ಒಂದು ತಿಂಗಳ ಬಳಿಕ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಉದಾಹರಣೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ನಲ್ಲಿ ಪ್ರಯೋಜನ ಸಿಗುವುದಿಲ್ಲ ಬದಲಾಗಿ ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಗ್ರಾಹಕರು ಈ ಕೆಳಗೆ ನೀಡಲಾಗಿರುವ ಲಿಂಕ್ ಬಳಸಿ ಯೋಜನೆಗೆ ಹೆಸರು ನೊಂದಾಯಿಸಬಹುದಾಗಿದೆ. https://sevasindhugs.karnataka.gov.in/