Share this news

ಬೆಂಗಳೂರು: ಕರ್ನಾಟಕ ವಿಧಾನಪರಿಷತ್​​ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್​​ ಪಕ್ಷದ ಅಭ್ಯರ್ಥಿಗಳಾದ ಜಗದೀಶ್​​ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಶುಕ್ರವಾರ ಸಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ವಿಧಾನಪರಿಷತ್ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ಇಂದು (ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಪರಿಷತ್​​ನ ಮೂರು ಸ್ಥಾನಗಳು ತೆರವಾಗಿದ್ದವು. ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದರಿಂದ ಸ್ಥಾನಗಳು ತೆರವಾಗಿದ್ದವು.

ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್​​ಗೆ ಪರಿಷತ್ ಉಪಚುಣಾವಣೆಯಲ್ಲಿಯೂ ಭರ್ಜರಿ ಮುನ್ನಡೆಯಾದಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ಕಂಗೆಟ್ಟಿದ್ದ ಜಗದೀಶ್ ಶೆಟ್ಟರ್ ಅವರಿಗೂ ತುಸು ನಿರಾಳತೆ ಒದಗಿದಂತಾಗಿದೆ. ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆಯಾದ ಬಳಿಕ ಶೆಟ್ಟರ್ ಅವರನ್ನು ಭೇಟಿಯಾಗಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು.

Leave a Reply

Your email address will not be published. Required fields are marked *