ಬೆಂಗಳೂರು: ಇಂದಿನಿಂದ ಪ್ರಾರಂಭವಾಗಿದ್ದ ಬಜೆಟ್ ಅಧಿವೇಶನ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಫೆಬ್ರುವರಿ 17ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇದರಿಂದ ಜನರಿಗೆ ಏನು ಕೊಡುಗೆ ಸಿಗಬಹುದು ಎಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲಿದ್ದು, ಬಿಜೆಪಿ ರಾಜ್ಯದ ಜನರಿಗೆ ಯಾವ ಗಿಫ್ಟ್ ಕೊಡಲಿದೆ ಎಂದು ಕಾದುನೋಡಬೇಕಿದೆ. ಈ ಮೂಲಕ ಒಂದಿದಿಷ್ಟು ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಫೆಬ್ರುವರಿ 17ರಂದು ಬಜೆಟ್ ಮಂಡನೆಯಾಗಲಿದ್ದು 24ರವರೆಗೂ ಅಧಿವೇಶನ ನಡೆಯಲಿದೆ.
ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ವಿಧಾನಸಭೆಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದಾರೆ. ಅಧಿವೇಶನ ಆರಂಭದ ಮೊದಲ ವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮತ್ತು ವಂದನಾ ನಿರ್ಣಯ ನಡೆಯಲಿದೆ. ಆ ಬಳಿಕ ಬಜೆಟ್ ಮಂಡನೆ, ಹಾಗು ನಂತರ 4 ದಿನಗಳ ಕಾಲ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.